February 3, 2026

ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು

0
Screenshot_20220127-100813_Chrome.jpg

ಮೈಸೂರು: ಬಾಳಿ ಬದುಕಬೇಕಾದ ದಂಪತಿ ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ.

ಸಾತಗಳ್ಳಿ ಲೇಔಟ್ ನ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿ ಈ ಕೆಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!