February 2, 2026

ಶಿವಮೊಗ್ಗ: ಲಾರಿ-ಕಾರು ಢಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು

0
image_editor_output_image355388033-1643260230536.jpg

ಶಿವಮೊಗ್ಗ: ಮಾಚೇನಹಳ್ಳಿ ಬಳಿ ಗುರುವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಮೃತಪಟ್ಟವರು.

ಮೃತರು ಕಾರಿನಲ್ಲಿ ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೊರಟಿದ್ದರು. ಲಾರಿ ಶಿವಮೊಗ್ಗದಿಂದ ಭದ್ರಾವತಿ ಕಡೆ ಸಾಗುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!