February 2, 2026

ಕುಂದಾಪುರ: ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕೂಟರ್: ವೀಡಿಯೋ ವೈರಲ್

0
IMG_20220127_175617.jpg

ಕುಂದಾಪುರ: ಕುಂದಾಪುರ ತಾಲೂಕಿನ ಆಲೂರು ಕ್ರಾಸ್ ಬಳಿ ಎಲೆಕ್ಟ್ರಿಕ್ ಸ್ಕೂಟರ್ ವೊಂದು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ನಡೆದಿದೆ.

ಆಲೂರು ನಿವಾಸಿ ಮಂಜುನಾಥ ಎಂಬವರ ಪುತ್ರ ಸುನೀಲ್ ಎಂಬವರು ಸವಾರಿ ಮಾಡಿಕೊಂಡು ಬರುತ್ತಿದ್ದ ಸ್ಕೂಟರ್‌ನಲ್ಲಿ ಬ್ಯಾಟರಿಯಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತತ್ ಕ್ಷಣ ಸ್ಕೂಟರ್‌ನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ.ಈ ವೇಳೆ ನೋಡ ನೋಡುತ್ತಿದ್ದಂತೆ ಸ್ಕೂಟರ್ ಹೊತ್ತಿ ಉರಿದಿದೆ. ಇವರು ಒಂದು ತಿಂಗಳ ಹಿಂದೆಯಷ್ಟೇ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿಸಿದ್ದರು. ಘಟನಾ ಸ್ಥಳಕ್ಕೆ ಸ್ಕೂಟರ್‌ ಕಂಪನಿ ಪ್ರತಿನಿಧಿಗಳು ಆಗಮಿಸಿದ್ದಾರೆ.ಸ್ಕೂಟರ್‌ ರೀಪ್ಲೇಸ್ ಮಾಡುವ ಭರವಸೆ ನೀಡಿ ಸುಟ್ಟು ಹೋದ ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!