February 1, 2026

ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ:
ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

0
Screenshot_2022-01-28-09-48-59-90_680d03679600f7af0b4c700c6b270fe7.jpg

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ ಹಾಗೂ ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಮತ್ತೆ ಕೋರ್ಟ್ ಬಿಗ್ ಶಾಕ್ ನೀಡಿದೆ.

ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ ಹಾಗೂ ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿ, ಸಮನ್ಸ್ ಜಾರಿಗೊಳಿಸಿದೆ.

ಇನ್ನು ಲೋಕಾಯುಕ್ತ ಎಸ್‌ಐಟಿ ತನಿಖಾಧಿಕಾರಿಗಳು ಸಲ್ಲಿಸಿದ್ದ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಜನಾರ್ದನ ರೆಡ್ಡಿ, ಅವರ ಆಪ್ತ ಕಾರ್ಯದರ್ಶಿ, ದೇವಿ ಎಂಟರ್ಪ್ರೈಸಸ್ ಪಾಲುದಾರ, ಓಬುಳಾಪುರಂ ಮೈನಿಂಗ್ ಕಂಪನಿ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 12 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!