March 19, 2026

ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಹಾಜರಾತಿ ಕಡ್ಡಾಯವಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್

0
image_editor_output_image-246899493-1643346256169.jpg

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ ಸಿ ನಾಗೇಶ್‌, ‘ಬೆಂಗಳೂರಿನಲ್ಲಿ 1ನೇ ತರಗತಿಯಿಂದ 9ನೇ ತರಗತಿಯ ವರೆಗೆ ಶಾಲೆ ತೆರೆಯಲು ತಜ್ಞರೊಂದಿಗೆ ಚರ್ಚಿಸಲಾಗುತ್ತದೆ. ಅವರ ಸಲಹೆ ಮೇರೆಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಆದ್ಯತೆ ಎಂದರು.

ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ. ಯಾವುದೇ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಮಾಡಲಾಗುವುದಿಲ್ಲ. ಪರೀಕ್ಷೆಗೂ ಶೇಕಡ.75 ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್‌ಲೈನ್‌ ತರಗತಿ ಪ್ರಾರಂಭ ಆಗುವವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ನಾಗೇಶ್‌ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!