ರಸ್ತೆ ಗುಂಡಿ ಮುಚ್ಚಲು ವಿಫಲವಾಗಿರುವ ಪಾಲಿಕೆಯ ಎಂಜಿನಿಯರ್‌ಗಳನ್ನು ಜೈಲಿಗೆ ಕಳಿಸಿದರೆ ಬುದ್ಧಿ ಬರುತ್ತದೆ: ಹೈಕೋರ್ಟ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ರಸ್ತೆ ಗುಂಡಿ ಮುಚ್ಚಲು ವಿಫಲವಾಗಿರುವ ಪಾಲಿಕೆಯ ಎಂಜಿನಿಯರ್‌ಗಳನ್ನು ಜೈಲಿಗೆ ಕಳಿಸಿದರೆ ಬುದ್ಧಿ ಬರುತ್ತದೆ‘ ಎಂದು ಹೈಕೋರ್ಟ್ ಗುರುವಾರ ಕಠಿಣ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಕೋರಮಂಗಲದ ವಿಜಯ್ ಮೆನನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಫೆಬ್ರುವರಿ 7ಕ್ಕೆ ಪಾಲಿಕೆಯ ಮುಖ್ಯ ಎಂಜಿನಿಯರ್ ಕೋರ್ಟ್‌ಗೆ ಖುದ್ದು ಹಾಜರಾಗಬೇಕು ಮತ್ತು ಗುಂಡಿ ಮುಚ್ಚುವ ಬಗ್ಗೆ ಹೊಸ ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ತಾಕೀತು ಮಾಡಿದೆ.
‘ಸಾಕಷ್ಟು ಸಮಯ ನೀಡಿದರೂ ತೃಪ್ತಿಕರ ಕೆಲಸ ನಡೆದಿಲ್ಲ. ಬೆಂಗಳೂರಿನ ರಸ್ತೆಗಳ ನಿರ್ವಹಣೆಯಲ್ಲಿ ಪಾಲಿಕೆ ವಿಫಲವಾಗಿದೆ. ಆದ್ದರಿಂದ, ಈ ಹೊಣೆಯನ್ನು ಬೇರೆ ಏಜೆನ್ಸಿಗೆ ನೀಡಿ ಎಂದು ಸರ್ಕಾರಕ್ಕೆ ಆದೇಶಿಸಬೇಕಾಗುತ್ತದೆ’ ಎಂದು ಬಿಬಿಎಂಪಿಗೆ ಎಚ್ಚರಿಸಿದೆ.




