February 1, 2026

ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ 13 ಕೋಟಿ ರೂ. ಬಿಡುಗಡೆ

0
Screenshot_2022-01-29-12-43-24-21_680d03679600f7af0b4c700c6b270fe7.jpg

ಬೆಂಗಳೂರು: ಸಂತ್ರಸ್ತರ ಪರಿಹಾರ ಯೋಜನೆ ಅಡಿ ಅತ್ಯಾಚಾರಕ್ಕೆ ಒಳಗಾದ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ನೀಡಬೇಕಿರುವ 20 ಕೋಟಿ ರೂ.ಗಳಲ್ಲಿ 13 ಕೋಟಿ ರೂ.ಗಳನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ(ಕೆಎಸ್‍ಎಲ್‍ಎಸ್‍ಎ) ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಲೈಂಗಿಕ  ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಕ್ತ ಮಾರ್ಗಸೂಚಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪೀಪಲ್ಸ್ ಮೂವ್‍ಮೆಂಟ್ ಅಗೇನ    ಸ್ಟ್ ಸೆಕ್ಷ್ಯುಯಲ್ ಅಸಾಲ್ಟ್(ಪಿಎಂಎಎಸ್‍ಎ) ಎಂಬ ಮಹಿಳಾ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!