ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಕ್ಕಳ ಬಟ್ಟೆಯೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ: 6.24 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 6.24 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನದಲ್ಲಿ ಬಂದಿಳಿದ ಮಂಗಳೂರು ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆಗ ಈತನಲ್ಲಿ ವಾಷರ್ ರೀತಿಯಲ್ಲಿದ್ದ ಬೆಳ್ಳಿ ಲೇಪಿತ 24 ಕ್ಯಾರೆಟ್ ಚಿನ್ನವನ್ನು ಪತ್ತೆಯಾಗಿದೆ. ಈ ಚಿನ್ನವನ್ನು ಮಕ್ಕಳ ಬಟ್ಟೆಯೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ತಕ್ಷಣ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈತನಿಂದ 129.500 ಗ್ರಾಂ ತೂಕದ 6,42,320 ಲಕ್ಷ ರೂ. ಮೊತ್ತದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.




