June 13, 2026

ಕುಕ್ಕೆ: ಹುಂಡಿ ಹಣ ಎಣಿಕೆ ವೇಳೆ ಹಣ ಕಳವು: ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಮಹಿಳಾ ಸಿಬ್ಬಂದಿ

0
IMG-20220129-WA0034.jpg

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆ ಮಾಡುವ ಮಹಿಳಾ ಸಿಬಂದಿ ಹಣ ಕಳವು ಮಾಡುವ ವೇಳೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಹುಂಡಿ ಎಣಿಕೆ ವೇಳೆ ಆರೋಪಿ ಮಹಿಳೆ ಹಣ ಕಳವು ಮಾಡಿ ಬಚ್ಚಿಟ್ಟಿದ್ದರು. ಇದು ಸೆಕ್ಯೂರಿಟಿ ಅವರ ಗಮನಕ್ಕೆ ಬಂದಿದ್ದು ಮೇಲಾಧಿಕಾರಿಗಳಿಗೆ ತಿಳಿಸಿದರು. ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಗೆ ದೇವಳದ ಇಒ ದೂರು ನೀಡಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Leave a Reply

Your email address will not be published. Required fields are marked *

error: Content is protected !!