March 22, 2026

ಉಪ್ಪಿನಂಗಡಿ: ಅನಧಿಕೃತ ಅಂಗಡಿಗಳನ್ನು ತೆರವು ವೇಳೆ ಅಡ್ಡಿ:
ಆರು ಮಂದಿ ವಿರುದ್ಧ ಪ್ರಕರಣ ದಾಖಲು

0
fir-387x290.jpeg

ಉಪ್ಪಿನಂಗಡಿ: ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಇರುವ ಅನಧಿಕೃತ ಅಂಗಡಿಗಳನ್ನು ತೆರವು ಮಾಡುವ ಸಲುವಾಗಿ ಸ್ಥಳಕ್ಕೆ ತೆರಳಿದಾಗ ಸ್ಥಳೀಯ 6 ಮಂದಿ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪಿಡಿಒ. ನೀಡಿರುವ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಉಪ್ಪಿನಂಗಡಿಯ ಯೋಗೀಶ್ ಪ್ರಭು, ಅವರ ಪತ್ನಿ, ರಾಜೇಶ್ ಪ್ರಭು, ಗೋಕುಲದಾಸ್ ಭಟ್, ಉತ್ತಮ ಭಟ್, ಉದಯ ಭಟ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!