May 16, 2026

ಸುಳ್ಯ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

0
IMG_20220115_220614.jpg

ಸುಳ್ಯ: ಸುಳ್ಯ ತಾಲೂಕು ಪೆರುವಾಜೆ ಗ್ರಾಮದಲ್ಲಿ 15 ವರ್ಷದ ಬಾಲಕಿಯೋರ್ವಳು ಮನೆಯಲ್ಲಿ ಒಬ್ಬಂಟಿಯಾಗಿರುವ ಸಂದರ್ಭ ಯುವಕನೋರ್ವ ಆಕೆಯ ಮನೆಯೊಳಗೆ ಬಂದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಜನವರಿ 30ರಂದು ಕೇಳಿಬಂದಿದೆ.

ಪೆರಾಜೆಯ ದೀಕ್ಷಿತ್ ಪೀಚೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನಾಗಿದ್ದು ಆತ ಬಾಲಕಿಯನ್ನು ತಬ್ಬಿ ಹಿಡಿದು ಮುಖಕ್ಕೆ ಚುಂಬಿಸಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!