May 16, 2026

ಜನರ ಮೇಲೆ ಹರಿದ ಎಲೆಕ್ಟ್ರಿಕ್ ಬಸ್: ಆರು ಮಂದಿ ಮೃತ್ಯು, 12ಕ್ಕೂ ಹೆಚ್ಚು ಜನರು ಗಾಯ

0
image_editor_output_image-1535140546-1643607174223.jpg

ಕಾನ್ಪುರ: ಚಾಲಕ ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ಸೊಂದು ಜನರ ಮೇಲೆ ಹರಿದು ಕನಿಷ್ಠ ಆರು ಮಂದಿ ಮೃತಪಟ್ಟು 12ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಕಾನ್ಪುರದಲ್ಲಿ ನಡೆದಿದೆ. ಟಾಟ್ ಮಿಲ್ ಕ್ರಾಸ್ ರಸ್ತೆ ಬಳಿ ಈ ಘಟನೆ ನಡೆದಿದೆ.

ವೇಗವಾಗಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಮತ್ತು ಜನರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರು ಕಾರುಗಳು ಮತ್ತು ಹಲವು ಬೈಕ್ ಗಳಿಗೆ ಹಾನಿಯಾಗಿದೆ.

ಟ್ರಾಫಿಕ್ ಬೂತ್ ಗೆ ಢಿಕ್ಕಿ ಹೊಡೆದು ನುಗ್ಗಿದ ಬಸ್, ಟ್ರಕ್ಕೊಂದಕ್ಕೆ ಢಿಕ್ಕಿ ಹೊಡೆದ ಕಾರಣ ನಿಂತಿತು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!