May 16, 2026

ಮಾಜಿ ಮಿಸ್ ಅಮೇರಿಕಾ ಚೆಸ್ಲಿ ಕ್ರಿಸ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

0
IMG-20220131-WA0009.jpg

ನ್ಯೂಯಾರ್ಕ್: ಮಾಜಿ ಮಿಸ್ ಅಮೇರಿಕಾ ಚೆಸ್ಲಿ ಕ್ರಿಸ್ಟ್ (30) ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಚೆಸ್ಲಿ ಕ್ರಿಸ್ಟ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾದರೂ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

2019 ರಲ್ಲಿ ಮಿಸ್ ಯುಎಸ್ಎ ಪಟ್ಟವನ್ನು ಚೆಸ್ಲಿ ಕ್ರಿಸ್ಟ್ ಗೆದ್ದಿದ್ದು, ಚೆಸ್ಲಿ ನಿಧನದಿಂದ ನಮಗೆ ತೀವ್ರ ಆಘಾತವಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನು ಚೆಸ್ಲಿ ಆತ್ಮಹತ್ಯೆಗೂ ಮುನ್ನ ಈ ದಿನ ನಿಮ್ಮ ಬಾಳಿನಲ್ಲಿ ಶಾಂತಿ ನೆಮ್ಮದಿ ತರಬಹುದು ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ‌.

Leave a Reply

Your email address will not be published. Required fields are marked *

error: Content is protected !!