ಉಡುಪಿ: ಕಾಲೇಜ್ ನಲ್ಲಿ ಹಿಜಾಬ್ ನಿರಾಕರಣೆ:
ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು
ಬೆಂಗಳೂರು: ಉಡುಪಿ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರಾಕರಿಸಿದ ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ.
ಮುಸ್ಲಿಂ ವಿದ್ಯಾರ್ಥಿನಿ ಯೊಬ್ಬಳು ಅರ್ಜಿ ಸಲ್ಲಿಸಿದ್ದು, ಹಿಜಾಬ್ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾಳೆ.
ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.