November 21, 2024

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯು ಏಕಾಂಗಿಯಾಗಿ ಸ್ಪರ್ಧಿಸಲಿದೆ: ಅಣ್ಣಾಮಲೈ

0

ಚೆನ್ನೈ: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ಬಿಜೆಪಿಯು, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆಯ ಮಿತ್ರಪಕ್ಷವಾಗಿದೆ. ಮಾಜಿ ಐಪಿಎಸ್‌ ಅಧಿಕಾರಿಯೂ ಆಗಿರುವ ಅಣ್ಣಾಮಲೈ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬೂತ್‌ ಮಟ್ಟದಲ್ಲಿ ಮೈತ್ರಿ ಧರ್ಮ ಕಾಪಾಡಿಕೊಳ್ಳುವುದು ಕಷ್ಟ. 9 ಜಿಲ್ಲೆಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ, ನಮ್ಮ ಸ್ಥಳೀಯ ಕಾರ್ಯಕರ್ತರು ಮತ್ತು ಮುಖಂಡರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುವುದಕ್ಕಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಮುಂಬರುವ ಚುನಾವಣೆಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ನಾವು ಮಾಡಿರುವ ಮನವಿಯನ್ನು ಎಐಎಡಿಎಂಕೆ ಗೌರವಿಸಿದೆ. ಆದರೆ, ನಮ್ಮ ಬೂತ್‌ ಮಟ್ಟದ ನಾಯಕರಿಗೆ ಅವಕಾಶ ಕಲ್ಪಿಸಿಕೊಡುವ ಅಗತ್ಯವಿದೆ. ಹಾಗಾಗಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಚುನಾವಣೆ ಸಂಬಂಧ ಮೂರು-ನಾಲ್ಕು ಬಾರಿ ನಡೆಸಿದ ಸಭೆ ವೇಳೆ, ಕ್ಷೇತ್ರ ಹಂಚಿಕೆ ಮಾತುಕತೆಗೆ ಒಪ್ಪಿಕೊಳ್ಳುವುದು ಸಮಂಜಸವಲ್ಲ ಎನಿಸಿದೆ. ಹಾಗಾಗಿ ಪರಸ್ಪರ ಮಾತುಕತೆ ನಡೆಸಿಯೇ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದೂ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವು ಫೆಬ್ರುವರಿ 22ರಂದು ಹೊರ ಬೀಳಲಿದೆ.

Leave a Reply

Your email address will not be published. Required fields are marked *

error: Content is protected !!