“ರುಖೋ ಜರಾ, ಸಬರ್ ಕರೋ.” ಖ್ಯಾತಿಯ ಯೂಟ್ಯೂಬರ್ ‘ಹಿಂದೂಸ್ತಾನಿ ಭಾವು’ ಬಂಧನ
ಮುಂಬೈ: ಮುಂಬೈನಲ್ಲಿರುವ ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ಅವರ ನಿವಾಸದ ಬಳಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರುಖೋ ಜರಾ, ಸಬರ್ ಕರೋ.” ಖ್ಯಾತಿಯ ಯೂಟ್ಯೂಬರ್ ‘ಹಿಂದೂಸ್ತಾನಿ ಭಾವು’ ಅಲಿಯಾಸ್ ವಿಕಾಸ್ ಫಟಕ್ (41) ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೋಮವಾರ 10 ಮತ್ತು 12 ನೇ ತರಗತಿಗಳ ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲು ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ಅವರ ನಿವಾಸದ ಬಳಿ ಜಮಾಯಿಸುವಂತೆ ಅವರು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಕಾರಣದಿಂದ ವಿಕಾಸ್ ವಿರುದ್ಧ ದೂರು ದಾಖಲಾಗಿತ್ತು.
ಕೋವಿಡ್ -19 ದೃಷ್ಟಿಯಿಂದ 10 ಮತ್ತು 12 ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆಗೆ ಒತ್ತಾಯಿಸಿ ನಿನ್ನೆ ಧಾರಾವಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದ ಪ್ರಭಾವಿ ವಿಕಾಸ್ ಪಾಠಕ್ ಅವರನ್ನು ಧಾರಾವಿ ಪೊಲೀಸರು ಬಂಧಿಸಿದ್ದಾರೆ. ಪಾಠಕ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.




