ಕೇಂದ್ರ ಬಜೆಟ್ 2022: ಆದಾಯ ತೆರಿಗೆ ಮಿತಿ ಬದಲಾವಣೆ ಇಲ್ಲ, ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿ ಜಾರಿ
ನವದೆಹಲಿ: ದೇಶದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಕೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದು, ಆದಾಯ ತೆರಿಗೆ ಸಲ್ಲಿಕೆ ವೇಳೆ ತಪ್ಪು ಸರಿಪಡಿಸಲು 2 ವರ್ಷಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಇಂದು ಕೇಂದ್ರ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ದೇಶದಲ್ಲಿ ಹೊಸ ಐಟಿ ರಿಟರ್ನ್ಸ್ ಪರಿಚಯಿಸಲಾಗುತ್ತದೆ ಎಂದು ಹೇಳಿದರು. ಹಾಲಿ ವರ್ಷ ಆದಾಯ ತೆರಿಗೆಯಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದಾಯ ತೆರಿಗೆ ಸಲ್ಲಿಸುವಾಗ ಆದಾಯವನ್ನು ಘೋಷಿಸಿ, ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶ ನೀಡಲಾಗುತ್ತದೆ. ದೇಶದಲ್ಲಿ ಹೊಸ ರಿಟರ್ನ್ಸ್ ಪರಿಚಯ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ತೆರಿಗೆ ಪಾವತಿ, ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿ ಜಾರಿಮಾಡಲಾಗುವುದು ಎಂದು ಹೇಳಿದರು.