ವಿಟ್ಲ: ಮದುಮಗ ಕೊರಗಜ್ಜ ವೇಷ ಧರಿಸಿದ ಆರೋಪ: ಮದುಮಗನ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಮಂಗಳೂರು: ಮದುಮಗ ಕೊರಗಜ್ಜನ ವೇಷ ಧರಿಸಿ ಬಂದ ಪ್ರಕರಣವೊಂದು ತಿಂಗಳ ಹಿಂದೆ ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಷ ಧರಿಸಿ ಬಂದ ಮದುಮಗ ಉಮರುಲ್ ಭಾಷಿತ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳೂರು 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಲಯ ವಜಾ ಮಾಡಿದೆ ಎಂದು ತಿಳಿದು ಬಂದಿದೆ.
ಭಾಷಿತ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳೂರು 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಜಾ ಮಾಡಿದ್ದು, ಇನ್ನೂ ಮುಂದೆ ಆತ ಜಾಮೀನಿಗಾಗಿ ಹೈ ಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ.