ಆರು ವರ್ಷದ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ: ಇಬ್ಬರು ಸ್ಥಳದಲ್ಲೇ ಮೃತ್ಯು

ಸಿರವಾರ: ಬೆಂಕಿ ಹಚ್ಚಿಕೊಂಡು ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸೋಮವಾರ ಜರುಗಿದೆ.
ಪಟ್ಟಣದ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಶಿರಿಷಾ(35) ಎಂಬುವವರು ಯಾವುದೋ ಕಾರಣಕ್ಕೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಈ ವೇಳೆ 6 ವರ್ಷದ ಮಗಳಾದ ಭುವನಳಿಗು ಬೆಂಕಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
