June 13, 2026

ಶಿಕ್ಷಣ ಸಂಸ್ಥೆ ಎನ್‌ಒಸಿ ಪಡೆಯಬೇಕಾದರೆ ಕನ್ನಡ ಕಲಿಕೆ ಕಡ್ಡಾಯ

0
IMG-20220202-WA0001.jpg

ಬೆಂಗಳೂರು: ಕೇಂದ್ರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳು ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯಲು ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಬೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಕೇಂದ್ರ ಪಠ್ಯಕ್ರಮ ಬೋಧಿಸುವ ಐಸಿಎಸ್‌ಇ, ಸಿಬಿಎಸ್‌ಇ ಮತ್ತು ಇನ್ನಿತರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳು ಎನ್‌ಒಸಿ ಪಡೆಯುವ ಸಂಬಂಧ ಶಿಕ್ಷಣ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದೆ.

ಕನ್ನಡ ಭಾಷಾ ಅಧಿನಿಯಮ-2015ರ ಪ್ರಕಾರ ರಾಜ್ಯ ಸರಕಾರದಿಂದ ನಿರಾಕ್ಷೇಪಣ ಪತ್ರ ಪಡೆಯುವ ಶಿಕ್ಷಣ ಸಂಸ್ಥೆಯು ಕನ್ನಡ ಭಾಷೆಯನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಡ್ಡಾಯವಾಗಿ ಬೋಧಿಸಬೇಕು. ಈ ನಿಯಮಗಳನ್ನು ಉಲ್ಲಂಘಿ ಸುವ ಅಥವಾ ಸರಿಯಾಗಿ ಪಾಲನೆ ಮಾಡದಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್‌.ಎಸ್‌. ಶಿವಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!