March 21, 2026

ಹುಣಸೂರಿನಲ್ಲಿ ಕಾರು- ಟ್ರಕ್ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು, ಮತ್ತಿಬ್ಬರು ಗಂಭೀರ

0
image_editor_output_image-1655176568-1643792631931.jpg

ಹುಣಸೂರು : ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅವಘಡ ನಡೆಡಿದ್ದು, ವಿದ್ಯಾರ್ಥಿ ಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ದುರ್ದೈವಿಗಳು . ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮೌಳೇಶ್ವರ ರೆಡ್ಡಿ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೇಜಸ್ ಮೂಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!