May 16, 2026

ಸುಳ್ಯ: ಪೈಚಾರು ಹೊಳೆಯಲ್ಲಿ 6 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image-110656994-1643795525683

ಸುಳ್ಯ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.


ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು.


ಇಂದು ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿರುತ್ತಾರೆ. ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕಾಣೆಯಾಗಿದ್ದು ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ ಆತನ ಮೃತದೇಹ ಲಭಿಸಿದೆ ಎಂದು ತಿಳಿದುಬಂದಿದೆ.
ನದಿ ಬದಿಯಲ್ಲಿ ಕಿರುಚಾಟ ಕೇಳಿದ ಸ್ಥಳೀಯರು ಹೋಗಿ ವಿಚಾರಿಸಿದಾಗ ನಡೆದ ಘಟನೆ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!