March 21, 2026

ಸುಳ್ಯ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0
Screenshot_2022-02-03-13-26-46-12_680d03679600f7af0b4c700c6b270fe7.jpg

ಸುಳ್ಯ :ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದಲ್ಲಿ 13 ವರ್ಷದ ಪ್ರಾಯದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು
ವರದಿಯಾಗಿದೆ.

ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್ ರವರ ಪುತ್ರಿ ನಿಹಾರಿಕಾ ( 13 ವರ್ಷ ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯಾಗಿದ್ದಾಳೆ.
ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿ ನವೋದಯ ಶಾಲೆಗೆ ಏಳನೇ ತರಗತಿಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್ ಲೈನ್ ತರಗತಿ ನಡೆಯುತ್ತಿತ್ತು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಪುನರಾರಂಭಗೊಳ್ಳಲಿತ್ತೆನ್ನಲಾಗಿದೆ.

ಇಂದು ಬೆಳಿಗ್ಗೆ ಹರೀಶ್ ಪೂಜಾರಿಕೋಡಿಯವರು ಮನೆಯಿಂದ ಹೊರಟು ಸುಳ್ಯದ ಕಡೆಗೆ ಬಂದ ಸ್ವಲ್ಪ ಹೊತ್ತಲ್ಲೇ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೆ ಶ್ರಮಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿದ್ದವರಿಗೆ ವಿಷಯ ಗೊತ್ತಾಗಿ ತಕ್ಷಣ ಹೋಗಿ ಹಗ್ಗದಿಂದ ಕೆಳಗಿಳಿಸಿ, ಗುತ್ತಿಗಾರಿಗೆ ಆಸ್ಪತ್ರೆಗೆ ಕರೆತಂದರು. ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಯಿತು. ಇಲ್ಲಿ ಬಂದು ತಲುಪಿದಾಗ ಆಕೆ ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದರು ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!