ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:
3 ಮೃತ್ಯು, 5 ಮಂದಿಗೆ ಗಾಯ
ಮಧ್ಯಪ್ರದೇಶ: ಇಲ್ಲಿನ ಬರ್ವಾನಿ ಜಿಲ್ಲೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಂ.3 ರ ಧೋಲನಿಯಾ ಗ್ರಾಮದ ಬಳಿ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಕ್ರಿ ಪೊಲೀಸ್ ಠಾಣೆಯ ಉಸ್ತುವಾರಿ ಸೋನು ಸಿತೋಲೆ ತಿಳಿಸಿದ್ದಾರೆ.
ದ್ವಿಚಕ್ರ ವಾಹನದಲ್ಲಿ ದಂಪತಿ ಮತ್ತು ಅವರ ಮೂವರು ಮಕ್ಕಳು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ದ್ವಿಚಕ್ರವಾಹನ ಪರಸ್ಪರ ಡಿಕ್ಕಿ ಹೊಡೆದಿದೆ. ಇನ್ನೊಂದು ದ್ವಿ ಚಕ್ರ ವಾಹನದಲ್ಲಿ ಮೂವರು ಪುರುಷರು ಪ್ರಯಾಣಿಸುತ್ತಿದ್ದರು.
ಮೂರು ವರ್ಷದ ಬಾಲಕ ಮತ್ತು ಇಬ್ಬರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ದಂಪತಿಗಳು ಮತ್ತು ಅವರ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಇತರ ಐದು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.





