March 21, 2026

ಉಡುಪಿ: ಹಿಜಾಬ್ ವಿವಾದ: ಜಿಲ್ಲಾಡಳಿತ ಜೊತೆ ಚರ್ಚಿಸಿ ಕ್ರಮ: ಎಸ್. ಅಂಗಾರ

0
images-37.jpeg

ಉಡುಪಿ: ಹಿಜಾಬ್ ವಿವಾದ ವಿಚಾರವಾಗಿ ಇವತ್ತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಸ್ತುವಾರಿ ಸಚಿವ ಎಸ್ ಅಂಗಾರ
ಈ ಕುರಿತು ಜಿಲ್ಲಾಡಳಿತ ಜೊತೆ ಚರ್ಚಿಸುತ್ತೇನೆ. ಒಂದೊಂದು ಕಾಲೇಜಿಗೆ ಒಂದೊಂದು ನಿಯಮ ಮಾಡಲು ಸಾಧ್ಯವಿಲ್ಲ. ಸರಕಾರ ಒಂದು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಉಡುಪಿಯ ಮಣಿಪಾಲದ ನೂತನ ಕಚೇರಿಯಲ್ಲಿ ಮಾತನಾಡಿದ ಸಚಿವರು, ಈ ರೀತಿಯ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ.
ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಯಾರೂ ಕೂಡ ತಮಗೆ ಬೇಕಾದಂತೆ ಕಾಲೇಜಿಗೆ ಬರಲು ಅವಕಾಶವಿಲ್ಲ. ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ. ಜಿಲ್ಲಾಡಳಿತದ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!