ಸಂಸದ ಅಸದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ಧಾಳಿ
ದೆಹಲಿ: ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರು ಉತ್ತರ ಪ್ರದೇಶದ ದಸ್ನಾ ಪ್ರದೇಶದಲ್ಲಿ ಹಾದು ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಮೀರತ್ ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಅಸಾದುದ್ದೀನ್ ಉವೈಸಿ ಅವರು ತನ್ನ ಅನುಯಾಯಿಗಳೊಂದಿಗೆ ಬೆಂಗಾವಲು ಮೂಲಕ ತೆರಳುತ್ತಿದ್ದ ವೇಳೆ ಛಜರಾಸಿ ಟೋಲ್ ಪ್ಲಾಝದಲ್ಲಿ ಈ ದಾಳಿ ನಡೆದಿದೆ.
ದೆಹಲಿಗೆ ತೆರಳುತ್ತಿದ್ದಾಗ ಅವರ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಮೀರತ್ನ ಕಿಥೌರ್ನಲ್ಲಿ ಚುನಾವಣಾ ಸಂಬಂಧಿತ ಕಾರ್ಯಕ್ರಮದ ನಂತರ ದೆಹಲಿಗೆ ತೆರಳುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಅವರ ವಾಹನದ ಮೇಲೆ ಗುಂಡುಗಳನ್ನು ಹಾರಿಸಲಾಯಿತು. ಒಟ್ಟು ಮೂರು ಜನರಿದ್ದು, ಅವರಲ್ಲಿ ಇಬ್ಬರು ಗುಂಡು ಹಾರಿಸಿದ್ದಾರೆ ಎಂದು ಓವೈಸಿ ಹೇಳಿದ್ದಾರೆ. ವಾಹನದ ಟೈರ್ಗಳು ಪಂಕ್ಚರ್ ಮಾಡಲಾಗಿದ್ದು ಫೋಟೋಗಳಲ್ಲಿ ಕಂಡು ಬಂದಿದೆ.
ಘಟನೆ ಬಳಿಕ ಮತ್ತೊಂದು ವಾಹನದಲ್ಲಿ ದೆಹಲಿಗೆ ತೆರಳಿರುವುದಾಗಿ ಓವೈಸಿ ಟ್ವೀಟ್ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.