June 10, 2026

ಕುಂದಾಪುರ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಗೇಟಿನಲ್ಲೇ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರ ನಡೆಗೆ ಖಂಡನೆ ವ್ಯಕ್ತಪಡಿಸಿದ ಯು.ಟಿ.ಖಾದರ್

0
IMG_20220110_132852.jpg

ಕುಂದಾಪುರ: ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಶಿರವಸ್ತ್ರ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ಇಂದು ದಿಢೀರನೇ ಗೇಟಿನಲ್ಲಿ ತಡೆದ ಘಟನೆಯ ಬಗ್ಗೆ ಶಾಸಕ ಯು.ಟಿ.ಖಾದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಖಂಡನೆಯನ್ನೂ ವ್ಯಕ್ತಪಡಿಸಿದ್ದಾರೆ.

ಕೆಲವು ಬಾಹ್ಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಕಳೆದ ಹಲವಾರು ವರ್ಷಗಳ ಹಿಂದಿನ ಪದ್ಧತಿಯನ್ನು ಮುರಿದು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧಿಸಿರುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಥಹ ಸೂಕ್ಷ್ಮ ವಿಚಾರಗಳಿಗೆ ಸರಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೇ ಇರುವುದು ಹಾಗೂ ಮೌನ ವಹಿಸಿರುವುದು ಶಾಲಾ ವಠಾರದಲ್ಲಿ ಇಂಥಹ ಕೋಮು ಭಾವನೆ ಬೆಳೆಯಬೇಕೆಂಬ ಅಪೇಕ್ಷೆಯಂತಿದೆ. ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣದ ದೃಷ್ಟಿಯಿಂದ ಇಂಥಹ ಘಟಣೆಗಳಿಗೆ ಆಸ್ಪದ ಕೊಡದೆ, ಹಿಂದೆ ಇರುವ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋಗಿ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯು.ಟಿ.ಖಾದರ್ ಸೂಚನೆ ನೀಡಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದರು.

Leave a Reply

Your email address will not be published. Required fields are marked *

error: Content is protected !!