June 10, 2026

ಗೋರಖ್‌ಪುರ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯೋಗಿ ಆದಿತ್ಯನಾಥ್‌ ನಾಮಪತ್ರ ಸಲ್ಲಿಕೆ

0
image_editor_output_image-773241993-1643965057620.jpg

ಗೋರಖ್‌ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶುಕ್ರವಾರ ಗೋರಖ್‌ಪುರ ನಗರ ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಯೋಗಿ ಅವರೊಂದಿಗೆ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಅವರು ಗೋರಖನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಅಮಿತ್‌ ಶಾ ಅವರೊಂದಿಗೆ ಗೋರಖ್‌ಪುರದ ಸಮಾವೇಶದಲ್ಲಿ ಭಾಗಿಯಾದ ಅವರು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!