September 20, 2024

23 ಕೆ.ಜಿ ಅಕ್ರಮ ಚಿನ್ನ ಸಾಗಾಟ ಪತ್ತೆ: 22 ಮಂದಿಯ ಬಂಧನ

0

ಕೋಝಿಕೋಡ್: ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ 22 ಮಂದಿಯನ್ನು ಕೋಝಿಕ್ಕೋಡ್‌ನ ಕರಿಪ್ಪೂರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 3 ಗುರುವಾರದಂದು ಬಂಧಿಸಿದ್ದಾರೆ.

ಪ್ರಯಾಣಿಕರು ದುಬೈನಿಂದ ಹಿಂದಿರುಗಿದವರಾಗಿದ್ದು, ವಿವಿಧ ವಿಮಾನಗಳಲ್ಲಿ ಇಲ್ಲಿಗೆ ಬಂದಿದ್ದರು. ತಪಾಸಣೆ ಮತ್ತು ಭದ್ರತಾ ತಪಾಸಣೆ ವೇಳೆ ಅಧಿಕಾರಿಗಳು ಅವರ ಬಳಿಯಿದ್ದ ಬರೋಬ್ಬರಿ 23 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಬಂಧನಕ್ಕೊಳಗಾದ ಮಂಗಳೂರಿನ ವ್ಯಕ್ತಿ ಚಿನ್ನವನ್ನು ಪಡೆಯಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಎಂದು ವರದಿಯಾಗಿದೆ. ಈ ಸಂಬಂಧ ಚಿನ್ನಾಭರಣ ಹೊರತುಪಡಿಸಿ ಎರಡು ಕಾರುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ವಿಚಾರಣೆ ನಡೆಸಿದಾಗ ಕಳ್ಳಸಾಗಣೆ ದಂಧೆಯಲ್ಲಿ ಹಲವರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಂತರ್ ರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧಗಳನ್ನು ಸಡಿಲಿಸಿದ ನಂತರ, ಕಳ್ಳಸಾಗಣೆ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!