May 16, 2026

ಹಿರಿಯ ಪತ್ರಕರ್ತ ಬಂಟ್ವಾಳ ತೋನ್ಸೆ ರಂಜನ್ ನಿಧನ

0
image_editor_output_image-582283367-1644034336152.jpg

ಪುತ್ತೂರು: ಹಿರಿಯ ಪತ್ರಕರ್ತ ಬಂಟ್ವಾಳ ತೋನ್ಸೆ ರಂಜನ್ (ಬಿ.ಟಿ. ರಂಜನ್) (65) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.05 ರ ಶನಿವಾರ ಮುಂಜಾನೆ ನಿಧನರಾದರು.

ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು.

ಶುಕ್ರವಾರ ತನ್ನ ಮನೆಯಲ್ಲಿದ್ದ ವೇಳೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!