June 10, 2026

ಹಿಜಾಬ್, ಟೋಪಿ ಹಾಕಿಕೊಂಡು ಮದ್ರಸಾಗೆ ಹೋಗಿ, ಶಾಲೆಗಲ್ಲ: ಸಂಸದ ಪ್ರತಾಪ್ ಸಿಂಹ

0
Screenshot_2022-02-05-10-03-23-41_680d03679600f7af0b4c700c6b270fe7.jpg

ಮೈಸೂರು: ಎಲ್ಲಾ ರೀತಿಯ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್ ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ.  ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಕಾಲೇಜಿಗೆ ‘ಜಾಬ್’ ಗಾಗಿ ಬರುತ್ತಾರೆ, ಆದರೆ ನೀವು ‘ಹಿಜಾಬ್’ ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ ಎಂದು ಮತ್ತೆ ತಮ್ಮ ನಾಲಗೆಯನ್ನು ಹರಿಯಬಿಟ್ಟಿದ್ದಾರೆ.

ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ, ಇದು ಭರತ ಖಂಡ ಎಂದರು.

ಹಿಂದೂ ಧರ್ಮದ ಬುನಾದಿ ಮೇಲಿರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ- ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಹೇರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Leave a Reply

Your email address will not be published. Required fields are marked *

error: Content is protected !!