ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಕ್ಲೀನ್‌ಚಿಟ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಶ್ಲೀಲ ಸಿ.ಡಿ. ಬಹಿರಂಗ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕ್ಲೀನ್‌ಚಿಟ್ ನೀಡಿದೆ.
ಅಶ್ಲೀಲ ಸಿಡಿ ಪ್ರಕರಣದ ತನಿಖೆ ಮುಕ್ತಾಯಗೊಳಿಸಿರುವ ಎಸ್‌ಐಟಿ ಶುಕ್ರವಾರ ನಗರದ ಮೊದಲನೇ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದೆ.
ತಂಡದ ತನಿಖಾಧಿಕಾರಿ ಎಂ.ಸಿ. ಕವಿತಾ ಅವರು ಎಸ್‌ಐಟಿ ಸರಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನಕುಮಾರ್ ಅವರ ಮೂಲಕ ಕೋರ್ಟ್‌ಗೆ ಸುಮಾರು 300 ಪುಟಗಳ ಅಂತಿಮ ವರದಿ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮಾಜಿ ಸಚಿವರ ವಿರುದ್ಧದ ಆರೋಪ ಸಾಬೀತಾಗಿಲ್ಲ ಎಂದು ಉಲ್ಲೇಖೀಸಿದೆ ಎಂದು ಮೂಲಗಳು ತಿಳಿಸಿವೆ.




