February 1, 2026

ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ: ರಾಹುಲ್ ಗಾಂಧಿ

0
Screenshot_2022-02-05-14-02-05-37_ae93b0d4e668ae3b9e42de29105ee7f0.jpg

ನವದೆಹಲಿ: ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲು ತಿಕ್ಕಾಟ ರಾಜಕೀಯ ಸ್ವರೂಪ ಪಡೆದಿರುವ ಬೆನ್ನಲ್ಲೇ ಈ ವಿಚಾರವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

‘ಶಿಕ್ಷಣದ ಹಾದಿಯಲ್ಲಿ ಹಿಜಾಬ್ ಅಡ್ಡಿಯಾಗುವಂತೆ ಮಾಡುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ನಾವು ಕದಿಯುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ಕೊಡುತ್ತಾಳೆ. ಆಕೆ ತಾರತಮ್ಯ ಮಾಡುವುದಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!