March 21, 2026

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ: ಸವಾರ ಮೃತ್ಯು

0
IMG_20220118_154408.jpg

ನಾರಾವಿ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಶನಿವಾರ ನಡೆದಿದೆ.

ಮೃತರನ್ನು ಬೈಕ್ ಸವಾರ, ಮಡಿಕೇರಿ ತಾಲೂಕಿನ ಊರುಬೈಲ್ ಚೆಂಬ್ ಗ್ರಾಮದ ಮುಕ್ಕುಯಿ ಮನೆ ನಿವಾಸಿ ಲಾರೆನ್ಸ್ ಎಂ.ಜಿ.(38) ಎಂದು ಗುರುತಿಸಲಾಗಿದೆ. ಸಹ ಸವಾರ ಬೆಳ್ತಂಗಡಿ ತಾಲೂಕಿನ ನೆಲ್ಲಿಕಾರು ನಿವಾಸಿ ಜಾನ್(81) ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸವಾರರು ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

You may have missed

error: Content is protected !!