March 21, 2026

ಬಂಟ್ವಾಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಮಹಿಳೆ ಮೃತ್ಯು-ಚಾಲಕನಿಗೆ ಗಾಯ

0
image_editor_output_image-672089-1644206313317

ಬಂಟ್ವಾಳ: ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ.

ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(೭೦) ಮೃತಪಟ್ಟವರು. ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!