ರಾಜ್ಯದಲ್ಲಿ 277 ಕೊರೋನಾ ಪ್ರಕರಣ ದಾಖಲು: 7 ಮಂದಿ ಮೃತ್ಯು
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 277 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,553ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,024ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು 343 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,39,990ಕ್ಕೆ ಏರಿಕೆಯಾಗಿದೆ. ಇನ್ನು 8,510 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 75,283 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 277 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.36ಕ್ಕೆ ಇಳಿದಿದೆ.





