March 21, 2026

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ

0
IMG_20220207_122804.jpg

ಮಂಗಳೂರು: ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ.

ಪ್ರಯಾಣಿಕನ ಲಗ್ಗೇಜನ್ನು ತಪಾಸಣೆ ಮಾಡಿದಾಗ ಅಲಂಕಾರಿಕ ವಸ್ತುಗಳಲ್ಲಿ 24 ಕ್ಯಾರೆಟ್‌ನ ಸುಮಾರು 127 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟಿರುವುದು ಕಂಡು ಬಂದಿದೆ.

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇದರ ಮೌಲ್ಯ 6,27,380 ರೂಪಾಯಿ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!