ಹಿಜಾಬ್ ವಿವಾದ:ಹೈಕೋರ್ಟ್ ನಿಂದ ಇಂದು ಮಹತ್ವದ ವಿಚಾರಣೆ ಸಾಧ್ಯತೆ
ಉಡುಪಿ: ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ಕೊಡಲಿದೆ.
ಕುಂದಾಪುರದ ಭಂಡಾರಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯುರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಇಂದು ಹೈಕೋರ್ಟ್ ತೀರ್ಪು ನೀಡಲಿದೆ.
ಈ ಕುರಿತು ಮತ್ತೋರ್ವ ವಿದ್ಯಾರ್ಥಿನಿ ಮಾತನಾಡಿದ್ದಾರೆ. ಹಿಜಾಬ್ ಪರವಾಗಿಯೇ ತೀರ್ಪು ಬರುತ್ತದೆ ಎಂಬ ವಿಶ್ವಾಸ ಇದೆ. ಒಂದು ವೇಳೆ ಬರದೇ ಇದ್ದರೇ ಕಾನೂನು ಹೋರಾಟ ಮುಂದು ವರೆಸುತ್ತೇವೆ ಅಂತಲೇ ಆ ವಿದ್ಯಾರ್ಥಿನಿ ಹೇಳಿದ್ದಾರೆ.





