March 21, 2026

ಬಾಗಲಕೋಟೆ: ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ, ಕಾಲೇಜು ಎದುರಿಗೆ ಕಲ್ಲು ತೂರಾಟ

0
image_editor_output_image-89712547-1644299380925.jpg

ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಹಾಕುವ ಕುರಿತು ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಿವಾದ ಉಂಟಾಗಿದ್ದು, ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಲೇಜಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ ಎರಡು ಕೋಮಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಿಗುವಿನ ವಾತಾವರಣ ಉಂಟಾಗಿದೆ.

ಸ್ಥಳಕ್ಕೆ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳಿ, ಡಿವೈಎಸ್ಪಿ ಎಮ್ ಪಾಂಡುರಂಗಯ್ಯ, ಸಿಪಿಐ ಜೆ. ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!