March 21, 2026

ಬಂಟ್ವಾಳ: ಕೇಸರಿ ಶಾಲು ಧರಿಸಿ ಬಂದ ವಾಮದಪದವು ಕಾಲೇಜಿನ ವಿದ್ಯಾರ್ಥಿಗಳು

0
IMG_20220208_121405.jpg

ಬಂಟ್ವಾಳ: ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದ ಘಟನೆ ಮಂಗಳವಾರ ನಡೆದಿದೆ.

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದು ಘೋಷಣೆ ಕೂಗಿದ್ದಾರೆ.

ವಿವಾದ ಸೃಷ್ಟಿಸಲು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕೊಂಡು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಮೆಸೇಜ್ ಗಳು ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ಶಾಲು ಧರಿಸಿ ಬಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!