March 21, 2026

ಉತ್ತರಪ್ರದೇಶದ ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಉಚಿತ ವಿದ್ಯುತ್, ಪ್ರತಿ ಮನೆಯ ಒಬ್ಬನಿಗೆ ಉದ್ಯೋಗ ದ ಭರವಸೆ

0
image_editor_output_image-1104134879-1644304021172.jpg

ನವದೆಹಲಿ:ಉತ್ತರಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ (ಫೆ.08) ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಜನತಾ ಪಕ್ಷದ ಪ್ರಣಾಳಿಕೆ “ಲೋಕ ಕಲ್ಯಾಣ್ ಸಂಕಲ್ಪ ಪತ್ರ” ಬಿಡುಗಡೆಗೊಳಿಸಿದ್ದಾರೆ.

ರೈತರ ಕೃಷಿಗೆ ಉಚಿತ ವಿದ್ಯುತ್ ಹಾಗೂ ಪ್ರತಿ ಮನೆಯ ಒಬ್ಬ ಸದಸ್ಯನಿಗೆ ಉದ್ಯೋಗ ನೀಡುವುದಾಗಿ ಅಮಿತ್ ಶಾ ಬಿಡುಗಡೆ ಮಾಡಿರುವ ಬಿಜೆಪಿ ಪ್ರಣಾಳಿಕೆಯಲ್ಲಿ ಮತದಾರರಿಗೆ ಭರವಸೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸಮ್ಮುಖದಲ್ಲಿ ಅಮಿತ್ ಶಾ ಅವರು ಬಿಜೆಪಿ ಪ್ರಣಾಳಿಕೆ ಲೋಕ ಕಲ್ಯಾಣ ಸಂಕಲ್ಪ ಪತ್ರವನ್ನು ಬಿಡುಗಡೆಗೊಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!