March 21, 2026

ಶಿವಮೊಗ್ಗ ಸರಕಾರಿ ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

0
image_editor_output_image1397885759-1644307018202.jpg

ಶಿವಮೊಗ್ಗ: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ -ಕೇಸರಿ ಶಾಲು ವಿವಾದ ತಾರಕಕ್ಕೆ ಏರಿದೆ. ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ರಾಷ್ಟ್ರಧ್ವಜವನ್ನು ಹಾರಿಸುವ ಧ್ವಜಕಂಬಕ್ಕೆ ಹತ್ತಿದ ಓರ್ವ ವಿದ್ಯಾರ್ಥಿ ಕೇಸರಿ ಧ್ವಜವನ್ನು ಹಾರಿಸಿದ್ದಾನೆ.

ಇದಕ್ಕೆ ಉಳಿದ ವಿದ್ಯಾರ್ಥಿಗಳು ಘೋಷಣೆ ಕೂಗಿ ಉತ್ತೇಜಿಸಿದ್ದಾರೆ. ಕೈಗಳಲ್ಲಿ ಕೇಸರಿ ಶಾಲುಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಮತ್ತಷ್ಟು ಉನ್ಮಾದದಿಂದ ಕಿರುಚಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!