March 21, 2026

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿ: ಮಹಿಳೆ ಮೃತ್ಯು

0
IMG_20220208_213921.jpg

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಘಟನೆಯಲ್ಲಿ ಮಹಿಳೆ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ.

ಸಂಜೆ 5ಗಂಟೆಯ ವೇಳೆಗೆ ಸುಮಾರು 52 ವರ್ಷದ ಮಹಿಳೆ ರಸ್ತೆ ದಾಟಲು ಬಿಸಿರೋಡು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಮುಂಬಾಗದ ರಸ್ತೆಯ ಬದಿಯಲ್ಲಿ ನಿಂತಿದ್ದರು.

ಮಂಗಳೂರು ಕಡೆಯಿಂದ ಬಂದ ಬೈಕ್ ಸವಾರ ಏಕಾಏಕಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಘಟನೆಯಿಂದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಬಂಟ್ಚಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಹೋಗುವ ವೇಳೆಗೆ ದಾರಿ ಮಧ್ಯೆ ಮಹಿಳೆ ಮೃತಪಟ್ಟ ಬಗ್ಗೆ ವೈದ್ಯ ರು ತಿಳಿಸಿದ್ದಾರೆ.

ಈವರಗೆ ಮೃತಪಟ್ಟ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂಬ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!