March 21, 2026

ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿ: ಮಲಾಲ

0
Screenshot_2022-02-09-10-33-29-02_ae93b0d4e668ae3b9e42de29105ee7f0.jpg

ಬೆಂಗಳೂರು: ರಾಜ್ಯದ ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್‌ ಝೈ ಪ್ರತಿಕ್ರಿಯಿಸಿದ್ದಾರೆ.

ಕಾಲೇಜು ನಮ್ಮನ್ನು ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದೆ ಎಂಬ ವಿದ್ಯಾರ್ಥಿನಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿಯಾಗಿದೆ. ಮಹಿಳೆಯರಿಗೆ ನಿರ್ಬಂಧಗಳು ಮುಂದುವರಿಯುತ್ತಿವೆ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ವಿಚಾರವಾಗಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಮಲಾಲ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!