ಹಿಜಾಬ್ ವಿವಾದ: ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ
ಬೆಂಗಳೂರು: ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಅವರ ನೇತೃತ್ವದ ಏಕ ಸದಸ್ಯ ಪೀಠವು ಹಿಜಾಬ್ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಿದೆ.
ವಾದ-ಪ್ರತಿವಾದ ಆಲಿಸಿ ವಿಸ್ತೃತ ಪೀಠ ರಚನೆ ಬಗ್ಗೆ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅವರು ಈ ಬಗ್ಗೆ ಎಷ್ಟು ಪೀಠದಲ್ಲಿ ವಿಚಾರಣೆ ನಡೆಸಬೇಕು ಎಂಬುವುದನ್ನು ತೀರ್ಮಾನಿಸಲಿದ್ದಾರೆ ಎಂದು ಹಾಲಿ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶ ಬರೆಸಿದ್ದಾರೆ. ಆದರೆ ಮಧ್ಯಂತರ ಆದೇಶ ನೀಡುವುದಿಲ್ಲ ಎಂದಿದ್ದಾರೆ.
ವಿಸ್ತೃತ ಪೀಠ ಅಂದರೆ ಎರಡು ಅಥವಾ ಮೂರು, ಐದು ಅಥವಾ ಏಳು ಪೀಠ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ತೀರ್ಮಾನಿಸಲಿದ್ದಾರೆ. ಸದ್ಯ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.




