May 18, 2026

ವಿಟ್ಲ: ಮನೆಗೆ ನುಗ್ಗಿ ಮಹಿಳೆಗೆ ಕತ್ತಿಯಿಂದ ಕಡಿದು ಚಿನ್ನಾಭರಣ ದರೋಡೆ

0
IMG-20220209-WA0008.jpg

ವಿಟ್ಲ: ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಕತ್ತಿಯಿಂದ ಕಡಿದು ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.

ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈಕೆ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!