March 23, 2026

ಪಡುಬಿದ್ರೆ: ಡೆತ್ ನೋಟು ಬರೆದಿಟ್ಟು ಯುವತಿ ಆತ್ಮಹತ್ಯೆ

0
IMG_20220210_160840.jpg

ಪಡುಬಿದ್ರೆ: ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿಯ ಯುವತಿಯೋರ್ವಳು ಆತ್ಮಹತ್ಯೆಗೈದ ಘಟನೆ ನಡೆದಿದೆ.

ಸೌಜನ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಡಿಗ್ರಿ ಪದವಿ ಪಡೆದು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೋವಿಡ್ ಹಿನ್ನೆಲೆಯಲ್ಲಿ ಮನೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಳು.

ಮನೆಯಲ್ಲಿ ತಂದೆ ಮತ್ತು ತಾಯಿ ಔಷಧಿಗೆಂದು ತೆರಳಿದ್ದು, ಮನೆಯಲ್ಲಿ ಅಜ್ಜಿ ಒಬ್ಬರೇ ಇದ್ದ ಸಮಯದಲ್ಲಿ ತಮ್ಮ ಕೋಣೆಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಈಕೆ ರಾಮಕೃಷ್ಣ ಎಂಬವರ ಎರಡನೇ ಪುತ್ರಿಯಾಗಿದ್ದಾಳೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!