March 23, 2026

ಮುಂದಿನ ಆದೇಶದವರಗೆ ಹಿಜಾಬ್-ಕೇಸರಿ ಶಾಲು ನಿಷೇಧ- ಹೈಕೋರ್ಟ್‌ನಿಂದ ಮಧ್ಯಂತರ ಆದೇಶ

0
IMG_20220210_165557.jpg

ಬೆಂಗಳೂರು: ಮುಂದಿನ ಆದೇಶದವರೆಗೆ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.
ಸೋಮವಾರದಿಂದ ವಿಚಾರಣೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಿಕ್ಷಣ ಸಂಸ್ಥೆಗಳು ಪುನಾರಂಭವಾಗಬೇಕು. ಪ್ರಕರಣ ಬಾಕಿ ಇರುವವರೆಗೆ ವಿದ್ಯಾರ್ಥಿಗಳು ಮತ್ತು ಸಂಬಂಧಪಟ್ಟವರು ಯಾವುದೇ ತೆರನಾದ ಧಾರ್ಮಿಕ ಉಡುಪು ಅಥವಾ ಶಿರ ವಸ್ತ್ರ ಹಾಕಬಾರದು ಎಂದು ನಾವು ಆದೇಶ ಮಾಡುತ್ತೇವೆ. ಎಲ್ಲರನ್ನೂ ನಾವು ನಿರ್ಬಂಧಿಸುತ್ತೇವೆ. ಶಾಂತಿ ಮತ್ತು ನೆಮ್ಮದಿ ಮುಖ್ಯ ಎಂದು ಹೈಕೋರ್ಟ್ ಹೇಳಿದ್ದು ವಿಚಾರಣೆಯನ್ನು ಸೋಮವಾರ ಮದ್ಯಾಹ್ನಕ್ಕೆ ಮುಂದೂಡಿದೆ.

ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿದರು.

ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.

ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.

Leave a Reply

Your email address will not be published. Required fields are marked *

error: Content is protected !!