May 18, 2026

ಹಿಜಾಬ್ ವಿವಾದ: ಸೋಮವಾರದಿಂದ 10ನೇ ತರಗತಿ ವರೆಗೆ ಶಾಲೆ ಆರಂಭ: ಸಿ.ಎಂ ಬಸವರಾಜ್ ಬೊಮ್ಮಾಯಿ

0
IMG_20220210_194700.jpg

ಬೆಂಗಳೂರು: ಹಿಜಾಬ್ – ಕೇಸರಿ ವಿವಾದ ಸಂಘರ್ಷ ತೀವ್ರ ಸ್ವರೂಪ ಪಡೆದಿರುವ ಹಿನ್ನಲೆಯಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದು, ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಫೆ. 14ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಒಂದೆಡೆ ಹೈಕೋರ್ಟ್ ವಿಸ್ತ್ರತ ಪೀಠ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆ ಮುಂದೂಡಿ, ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯಾರಂಭ ಮಾಡಲಿ. ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಯಾರೊಬ್ಬರೂ ಯಾವುದೇ ಧಾರ್ಮಿಕ ಗುರುತುಗಳನ್ನು (ಹಿಜಾಬ್ ಮತ್ತು ಶಾಲು) ಬಳಸುವಂತಿಲ್ಲ ಎಂದು ಸೂಚಿಸಿದೆ.

Leave a Reply

Your email address will not be published. Required fields are marked *

error: Content is protected !!