May 18, 2026

ಕೇರಳದಲ್ಲಿ ಧರ್ಮದ ಹೆಸರಲ್ಲಿ ಕೊಲೆ ನಡೆಯಲ್ಲ: ಯೋಗಿಗೆ ಪಿಣರಾಯಿ ತಿರುಗೇಟು

0
IMG_20220210_222518.jpg

ನವದೆಹಲಿ: ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಯಪಡುವಂತೆ ಉತ್ತರಪ್ರದೇಶವು ಕೇರಳವಾಗಿ ಬದಲಾದರೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವಾಗಿ ಬದಲಾಗುತ್ತದೆ. ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಉತ್ತಮ ಜೀವನಮಟ್ಟ ದೊರೆಯುತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು ಎಂದು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಇತರೆ ಪಕ್ಷದ ಮುಖಂಡರು ಟೀಕಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿ, ತೀರುಗೇಟು ನೀಡಿದ್ದಾರೆ.

ಈ ಕುರಿತು ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಉತ್ತರಪ್ರದೇಶವು ಕಾಶ್ಮೀರ, ಬಂಗಾಳ ಅಥವಾ ಕೇರಳವಾಗಿ ಬದಲಾಗುತ್ತದೆ ಎಂದು ಮತದಾರರಿಗೆ ಯೋಗಿ ಆದಿತ್ಯನಾಥ್ ಹೇಳುತ್ತಾರೆ.

Leave a Reply

Your email address will not be published. Required fields are marked *

error: Content is protected !!